Latest
ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಗೆ ಕೊರೊನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತ: ನಟಿ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ನಟಿ ರಕುಲ್, ಕೋವಿಡ್ ಟೆಸ್ಟ್ ನಲ್ಲಿ ತಮಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿದ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ರಕುಲ್ ಸಧ್ಯ ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದ ಮೇಡೇ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ.



