ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರ ಆತಂಕದ ಬೆನ್ನಲ್ಲೇ ನೈಟ್ ಕರ್ಫ್ಯೂ ಕೂಡ ಜಾರಿಯಾಗಿದೆ. ಈ ನಡುವೆಯೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಸಿಇಒ, ಡಿಡಿಪಿಐ, ಡಿಡಿಪಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಕೊರೊನಾ ರೂಪಾಂತರ ವೈರಸ್ ಇದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಕೂಡ ತಿಳಿಸಿದೆ ಎಂದರು.
* ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವುದುವು ಪೋಷಕರ ಆಯ್ಕೆ. ಮಕ್ಕಳು ಕಡ್ಡಾಯವಾಗಿ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಬರಬೇಕು.
* ಶಿಕ್ಷಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ.
* 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಮಾಸ್ಕ್ ಜೊತೆ ಫೇಸ್ ಶೀಲ್ಡ್ ಕಡ್ಡಾಯ.
* ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆ ಇಲ್ಲ. ಬಿಸಿಯೂಟಕ್ಕೆ ಗುಂಪು ಸೇರುವುದರಿಂದ ಬಿಸಿಯೂಟ ನೀಡದಿರಲು ನಿರ್ಧರಿಸಲಾಗಿದೆ.
ಇಂದಿನಿಂದ ರಾಜ್ಯದಲ್ಲಿ ನೈಟ್ ಕಫ್ಯೂ ಜಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ