Latest

ರಾಜ್ಯಕ್ಕೂ ವಕ್ಕರಿಸಿದ ರೂಪಾಂತರಿ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ಪ್ರಭೇದದ ಕೊರೊನಾ ಸೋಂಕು ಇದೀಗ ರಾಜ್ಯಕ್ಕೂ ವಕ್ಕರಿಸಿದ್ದು, ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿರುವ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಡಿಸೆಂಬರ್ 19ರಂದು ಭಾರತಕ್ಕೆ ಆಗಮಿಸಿದ್ದ ಬ್ರಿಟನ್ ಮೂವರಲ್ಲಿ ಸೋಂಕು ಪತೆಯಾಗಿದೆ. ಡಿಸೆಂಬರ್ 24ರಂದು ಮತ್ತೆ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು 7 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಡಿಸೆಂಬರ್ 12ರಿಂದ 21ರವರೆಗೂ ಒಟ್ಟು 1,582 ಜನ ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ 7 ಜನರಲ್ಲಿ ಸೋಂಕು ಪತ್ತೆಯಾಗಿರುವುದರಿಂದ 1,582 ಜನರಿಗೂ ಆರ್ ಟಿಪಿಸಿಆರ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button