Latest

ಸೂಪರ್ ಸ್ಟಾರ್ ರಜನಿಕಾಂತ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಅನ್ನಾತೆ’ ಚಿತ್ರದ ಶೂಟಿಂಗ್ ಗಾಗಿ ನಟ ರಜನಿಕಾಂತ್ ಹೈದರಾಬಾದ್ ಗೆ ತೆರಳಿದ್ದರು. ಶೂಟಿಂಗ್ ಸೆಟ್ ನಲ್ಲಿ 8 ಜನರಲ್ಲಿ ಕೊರೊನ ಸೋಂಕು ಕಾಣಿಸಿಕೊಂಡಿದ್ದು, ತತ್ಕಾಲಿಕವಾಗಿ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ. ಶೂಟಿಂಗ್ ಸೆಟ್ ನಲ್ಲಿ ಹಲವರಿಗೆ ಕೊರೊನಾ ಹಿನ್ನೆಲೆಯಲ್ಲಿ ರಜನಿಕಾಂತ್ ಅವರಿಗೂ ಕೂಡ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಅವರ ವರದಿಯಲ್ಲಿ ನೆಗೆಟಿವ್ ಬಂದಿದೆ. ಆದಾಗ್ಯೂ ರಜನಿ ಅವರ ರಕ್ತದೊತ್ತಡದಲ್ಲಿ ತೀವ್ರ ಏರುಪೇರಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Home add -Advt

ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ಏರುಪೇರಾಗುತ್ತಿದೆ ಹಾಗೂ ಾವರಲ್ಲಿ ಅತಿಯಾದ ಸುಸ್ತು ಕಂಡುಬರುತ್ತಿದೆ. ಇದರ ಹೊರತಾಗಿ ಬೇರೇನೂ ಆರೋಗ್ಯ ಸಮಸ್ಯೆಯಿಲ್ಲ ಎಂದು ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

Related Articles

Back to top button