ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಿದ್ರೆಗೆ ಜಾರಿದ್ದರು.
ಈ ಕುರಿತ ವೀಡಿಯೋ ಈಗ ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ರಾಜ್ಯಗಳ ರೈತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ಬೆಂಗಳೂರಿನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ಈ ಮೂವರೂ ಸಾಲಿನಲ್ಲಿ ಕುಳಿತು ನಿದ್ದೆಗೆ ಜಾರಿದ್ದರು. ಪ್ರಧಾನಿ ಮೋದಿ ವಿವಿಧ ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಿದರು. ಜೊತೆಗೆ ರೈತರಿಗೆ 18 ಸಾವಿರ ಕೋಟಿ ರೂಗಳನ್ನು ಕೊಡುಗೆಯಾಗಿ ನೀಡಿದರು.
ಆದರೆ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಯಡಿಯೂರಪ್ಪ, ಸದಾನಂದ ಗೌಡ ಮತ್ತು ಗೋವಿಂದ ಕಾರಜೋಳ ನಿದ್ರೆ ಮಾಡುತ್ತಿದ್ದರು.
9 ಕೋಟಿ ಅನ್ನದಾತರ ಖಾತೆಗೆ ಹಣ ಜಮಾ ಮಾಡಿದ ಪ್ರಧಾನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ