ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೊಲೀಸರು ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಹೈಡ್ರಾಮಾ ನಡೆದಿದೆ. ಪಾಲಿಕೆ ಎದುರು ಕನ್ನಡ ಧ್ವಜ ಹಾರಾಡಿಸುವ ನಿಟ್ಟಿನಲ್ಲಿ ಪೊಲೀಸರು ಹಾಗೂ ಕನ್ನಡಪರ ಹೋರಾಟಗಾರರ ನಡುವೆ ವಾಗ್ವಾದ ನಡೆದಿದೆ.
ಪಾಲಿಕೆ ಎದುರು ಕನ್ನಡ ದ್ವಜ ಸ್ತಂಭ ಸ್ಥಾಪಿಸಲು ಅನುಮತಿ ಇಲ್ಲ ಎಂದು ಹೇಳಿದರೂ ಕನ್ನಡಪರ ಸಂಘಟನೆ ಕಾರ್ಯಕರ್ತರು ಧ್ವಜ ಸ್ತಂಭ ಸ್ಥಾಪಿಸಿ ಕನ್ನಡ ಬಾವುಟ ಹಾರಿಸಿದ್ದಾರೆ. ಈ ವೇಳೆ ಧ್ವಜ ಸ್ಥಂಭ ತೆರವುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರು ಹಾಗೂ ಪೊಲೀಸರ ನಡುವೆ ನೂಕಾಟ-ತಳ್ಳಾಟ ಆರಂಭವಾಗಿದೆ.
ಅಂತಿಮವಾಗಿ ಹೋರಾಟಗಾರರು ಪಟ್ಟುಬಿಡದೇ ಕನ್ನಡ ಧ್ವಜ ಸ್ತಂಭ ಸ್ಥಾಪಿಸಿಸಿದ್ದು, ಪಾಲಿಕೆ ಎದುರು ಸ್ಥಾಪಿಸಿರುವ ಧ್ವಜ ಸ್ತಂಭವನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು, ಒಂದು ವೇಳೆ ಪೊಲೀಸರು ತೆರವಿಗೆ ಮುಂದಾದರೆ ಇಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ