Kannada NewsLatest

ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಬಸ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಿನಿ ಬಸ್ ಟೈಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚನಾಳ ಕ್ರಾಸ್ ಬಳಿ ನಡೆದಿದೆ.

ಮಿನಿ ಬಸ್ ನಲ್ಲಿ 20ಕ್ಕೂ ಹೆಚ್ಚು ಜನರು ಮದುವೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬಸ್ ಟೈಯರ್ ಬ್ಲಾಸ್ಟ್ ಆಗಿ ರಸ್ತೆ ಮಧ್ಯೆಯೇ ಬಸ್ ಪಲ್ಟಿಯಾಗಿದೆ.

ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button