ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಡಾ.ಕಸ್ತೂರಿ ರಂಗನ್ ವರದಿಯ ಬಗ್ಗೆ ಇಂದು ಸಚಿವ ಸಂಪುಟ ಉಪಸಮಿತಿಯ ಸಭೆಯನ್ನು ಸಮಿತಿ ಅಧ್ಯಕ್ಷ ಆನಂದ ಸಿಂಗ್ ಅವರ ನೇತೃತ್ವದಲ್ಲಿ ನಡೆಸಿ, ವರದಿ ಕುರಿತು ಸಮಿತಿ ಸದಸ್ಯರೊಂದಿಗೆ ವರದಿಯ ಸಾಧಕ – ಭಾದಕಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯು ಸಂಪೂರ್ಣ ಅವೈಜ್ಞಾನಿಕವಾಗಿದೆ. ಈ ವರದಿಯಿಂದಾಗಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಾಕಷ್ಟು ಸಮಸ್ಯೆ ಉಲ್ಬಣವಾಗಲಿದೆ. ಈ ನಿಟ್ಟಿನಲ್ಲಿ ವರದಿಯನ್ನು ಪುನರ್ ಪರಿಶೀಲಿಸಿದ ನಂತರವೇ ವರದಿಯನ್ನು ಒಪ್ಪಿಕೊಳ್ಳಲಾಗುವುದು. ಈ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಲಾಯಿತು ಹಾಗೂ ಕೇಂದ್ರ ಪರಿಸರ ಖಾತೆ ಸಚಿವರಿಗೆ ಈ ಸಭೆಯ ಮಾಹಿತಿಯನ್ನು ತುರ್ತಾಗಿ ತಿಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ಉಪಸಮಿತಿಯ ಅಧ್ಯಕ್ಷರು ಹಾಗೂ ಅರಣ್ಯ ಸಚಿವರಾದ ಆನಂದ ಸಿಂಗ್, ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ , ಗೃಹಸಚಿವ ಬಸವರಾಜ ಬೋಮ್ಮಾಯಿ , ಕಂದಾಯ ಸಚಿವ ಆರ್.ಅಶೋಕ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಹಾಗೂ ಉಪ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ