Latest

ಸಚಿವ ಅನಂತಕುಮಾರ ಹೆಗಡೆಗೆ ಬೆದರಿಕೆ ಕರೆ

ಪ್ರಗತಿವಾಹಿನಿ ಸುದ್ದಿ, ಶಿರಸಿ:

ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆಗೆ ಬೆದರಿಕೆ ಕರೆಯೊಂದು ಬಂದಿದ್ದು ಈ ಕುರಿತು ಶಿರಸಿಯ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಭಾನುವಾರ ಅವರ ಮನೆಯ ದೂರವಾಣಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂದರ್ಭದಲ್ಲಿ ಸಚಿವರು ಮನೆಯಲ್ಲಿರಲಿಲ್ಲ.  ಅನಂತಕುಮಾರ ಹೆಗಡೆಯವರ ಪತ್ನಿ ಕರೆ ಸ್ವೀಕರಿಸಿದ್ದಾರೆ. ಬೇರೆ ಧರ್ಮದ ವಿಷಯ ಮಾತನಾಡುವುದನ್ನು ನಿಲ್ಲಿಸಿ, ನಿಮ್ಮ ಕೆಲಸ ಮಾಡಿಕೊಂಡು ಹೋಗಿ. ಇಲ್ಲವಾದಲ್ಲಿ ಸುಮ್ಮನಿರಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಕೂಡ ಅವರಿಗೆ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ಸಚಿವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button