ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೊಸ ವರ್ಷಾಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೂ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮ, ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಇಂದು ಸಂಜೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿಗೆ ಸಿದ್ಧತೆ ನಡೆಸಲಾಗಿತ್ತು. ಆದರೆ ರಾಜ್ಯ ಸರ್ಕಾರ ತನ್ನ ತೀರ್ಮಾನದಲ್ಲಿ ಏಕಾಏಕಿ ಬದಲಾವಣೆ ಮಾಡಿದ್ದು, ಇದೀಗ ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದು, ರಾಜಧಾನಿಯ ಎಲ್ಲಾ ರಸ್ತೆಗಳಿಗೆ ಬ್ಯಾರಿಕೆಡ್ ಹಾಕಿ ಬಂದ್ ಮಾಡಲಾಗುತ್ತಿದ್ದು, ಸಿಲಿಕಾನ್ ಸಿಟಿ ಜನರಿಗೆ ಹೊಸ ವರ್ಷಾಚಾರಣೆಗೆ ಸರ್ಕಾರ ಶಾಕ್ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ