Latest

ಶಾಲೆ-ಕಾಲೇಜುಗಳು ಆರಂಭ; ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆ ಬಗ್ಗೆ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆಯಿಂದ ಶಾಲಾ -ಕಾಲೇಜುಗಳು ಆರಂಭವಾಗಲಿದ್ದು, ಪೋಷಕರು ಮಕ್ಕಳನ್ನು ಮನೆಯಲ್ಲಿ ಹೇಗೆ ನೋಡಿಕೊಳ್ಳುತ್ತಾರೋ ಹಾಗೇ ಶಿಕ್ಷಕರು ಮಕ್ಕಳನ್ನು ಕಾಳಜಿಯಿಂದ ನೋಡಿಕೊಳ್ಳುವ ವಿಶ್ವಾಸವಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ನಾಳೆಯಿಂದ 6ರಿಂದ 9 ನೇತರಗತಿವರೆಗೆ ವಿದ್ಯಾಗಮ ತರಗತಿಗಳು ಆರಂಭವಾಗಲಿದ್ದು, ಎಸ್ ಎಸ್ ಎಲ್ ಸಿ, ಪಿಯುಸಿ ತರಗತಿಗಳು ಆರಂಭವಾಗಲಿವೆ. ಬೆಂಗಳೂರಿನ ಸುತ್ತಮುತ್ತಲಿನ ಹಲವು ಶಾಲೆ-ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕೊರೊನಾ ಬಗ್ಗೆ ಪೋಷಕರು ಹಾಗೂ ಮಕ್ಕಳು ಯಾವುದೇ ರೀತಿಯ ಆತಂಕಕ್ಕೀಡಾಗುವುದು ಬೇಡ ಎಂದು ಹೇಳಿದರು.

ವಿದ್ಯಾರ್ಥಿಗಳು ತರಗತಿಗಳಿಗೆ ಬರುವುದು ಕಡ್ಡಾಯವಲ್ಲ. ಆದರೆ ತರಗತಿಗಳಿಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಬರಬೇಕು. ಶಾಲೆ-ಕಾಲೇಜುಗಳಲ್ಲಿ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾಮಜಿಕ ಅಂತರ, ಶುಚಿತ್ವ ಸ್ಯಾನಿಟೈಸರ್ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಈ ಬಾರಿ ಮಾರ್ಚ್ ನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆ ನಡೆಯುವುದಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ನಾನು ಭರವಸೆ ನೀಡುತ್ತಿದ್ದೇನೆ. ವಿದ್ಯಾರ್ಥಿಗಳಿಗೆ ಓದಲು ಸಾಕಷ್ಟು ಸಮಯಾವಕಾಶ ನೀಡಲಾಗುತ್ತದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button