Kannada NewsKarnataka NewsLatest

ಸ್ವತಂತ್ರ ಗ್ರಾಮ ಪಂಚಾಯಿತಿ: ಆಕ್ಷೇಪಣೆ, ಸಲಹೆ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲೆಯ ಕಿತ್ತೂರು ತಾಲ್ಲೂಕಿನ  ದಾಸ್ತಿಕೊಪ್ಪ ಗ್ರಾಮ ಪಂಚಾಯಿತಿಯಿಂದ ವೀರಾಪುರ ಹಾಗೂ ಅಮರಾಪುರ ಗ್ರಾಮಗಳನ್ನು ಪ್ರತ್ಯೇಕಿಸಿ ವೀರಾಪುರ ಸ್ವತಂತ್ರ ಗ್ರಾಮ ಪಂಚಾಯಿತಿಯಾಗಿ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕರಡು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.
ಈ ಅಧಿಸೂಚನೆಯಿಂದ ಬಾಧಿತರಾಗಬಹುದಾದ ಯಾವುದೇ ವ್ಯಕ್ತಿಗಳು ತಮ್ಮ ಆಕ್ಷೇಪಣೆ ಮತ್ತು ಸಲಹೆಗಳನ್ನು ಜನವರಿ ೪, ೨೦೨೧ ರೊಳಗೆ ಜಿಲ್ಲಾಧಿಕಾರಿಗಳು, ಬೆಳಗಾವಿ ಇವರಿಗೆ ಸಲ್ಲಿಸಬಹುದು. ನಿಗದಿತ ಅವಧಿ ಮೀರಿ ಬಂದ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button