Latest

ರಸ್ತೆ ಅಪಘಾತ; ಸಿಎಂ ಭದ್ರತೆಗೆ ನಿಯೋಜಿಸಿದ್ದ ಹೆಡ್ ಕಾನ್ಸ್ ಟೇಬಲ್ ಸಾವು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭದ್ರತೆಗೆ ನೇಮಕ ಮಾಡಲಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಸಾಗರ ರಸ್ತೆಯಲ್ಲಿ ನಡೆದಿದೆ.

ಜಲ್ಫೀಕರ್ (40) ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಹೆಡ್ ಕಾನ್ಸ್ ಟೇಬಲ್. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಜಿಲ್ಲಾ ಪೊಲೀಸ್ ಕಚೇರಿಯ ಇಎಸ್ ಟಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Home add -Advt

ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಆಗಮಿಸುತ್ತಿರುವುದರಿಂದ ಜುಲ್ಫೀಕರ್ ಅವರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿತ್ತು. ಕರ್ತವ್ಯ ಮುಗಿಸಿ ಸಾಗರ ರಸ್ತೆಯಲ್ಲಿ ನೆಡೆದು ಹೋಗುತ್ತಿದ್ದ ಜುಲ್ಫಿಕರ್ ಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಸ್ಥಳದಲ್ಲೇ ಜುಲ್ಫಿಕರ್ ಮೃತಪಟ್ಟಿದ್ದಾರೆ.

 

Related Articles

Back to top button