ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದ ಜನರು ಹಲವು ದಿನಗಳಿಂದ ಕಾಯುತ್ತಿದ್ದ ಕೊರೊನಾ ಸೋಂಕಿಗೆ ಲಸಿಕೆ ಬಂದಿದ್ದು, ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ -ಡಿಸಿಜಿಐ ಅಧ್ಯಕ್ಷ ವಿ.ಜಿ.ಸೋಮಾನಿ, ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರದು ಲಸಿಕೆಗಳನ್ನು ಭಾರದಲ್ಲಿ ತುರ್ತು ಸಂದರ್ಭಗಳಲ್ಲಿ ಬಳಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿರುವ ಕೋವ್ಯಾಕ್ಸಿನ್ ಹಾಗೂ ಆಸ್ಟ್ರಾಜನಿಕಾ, ಆಕ್ಸ್ ಫರ್ಡ್ ವಿವಿ ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಲಸಿಕೆ ಬಳಕೆಗೆ ಅನುಮತಿ ನೀಡಲಾಗಿದೆ ಎಂದರು. ಈ ಮೂಲಕ ಶೀಘ್ರದಲ್ಲಿಯೇ ಭಾರತ ಸರ್ಕಾರದಿಂದ ಈ ಲಸಿಕೆಗಳ ಅದಿಕೃತ ವಿತರಣೆ ಕೂಡ ಆರಂಭವಾಗುವ ಸಾಧ್ಯತೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ