ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಮಹಾನಗರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಬುಧವಾರ, ಗುರುವಾರ ಮತ್ತು ಶುಕ್ರವಾರ ಅವರು ತುಮಕೂರು, ಹುಬ್ಬಳ್ಳಿ -ಧಾರವಾಡ ಹಾಗೂ ಬೆಳಗಾವಿ ಮಹಾನಗರದ ಸ್ಮಾರ್ಟ್ ಸಿಟಿ ಕಾಮಗಾರಿ, ಮಹಾನಗರ ಪಾಲಿಕೆ ಅಭಿವೃದ್ಧಿ ಯೋಜನೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪರಿಶೀಲನೆ ನಡೆಸುವರು.
ಬುಧವಾರ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ತುಮಕೂರು ನಗರದ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಮಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ.
ನಂತರ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡುವರು. ಗುರುವಾರ ಬೆಳಗ್ಗೆ 7 ಗಂಟೆಯಿಂದ ಹುಬ್ಬಳ್ಳಿ ನಗರದ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಮಧ್ಯಾಹ್ನ 2 ಗಂಟೆಯವರೆಗೆ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಯೋಜನೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಸಂಜೆ 4.30ಕ್ಕೆ ಬೆಳಗಾವಿಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ, ಬಿಜೆಪಿ ಕಚೇರಿಗೆ ಭೇಟಿ ನೀಡುವರು.
ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ನಗರದ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸುವರು. ನಂತರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು.
ಶುಕ್ರವಾರ ರಾತ್ರಿ 7.25ಕ್ಕೆ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವರು.
ಸಚಿವ ಭೈರತಿ ಬಸವರಾಜ ಅವರ ಪ್ರವಾಸದ ಸಮಗ್ರ ವಿವರ ಇಲ್ಲಿದೆ – GM (T) Tour Programme
ಯಕ್ಷಗಾನ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕಲಾವಿದ ಸಾವು
ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿದ್ದಾರೋ? ಕಾಂಗ್ರೆಸ್ ನಲ್ಲಿದ್ದಾರೋ? – ಜೊಲ್ಲೆ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ