ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ರಾಜ್ಯ ಸರ್ಕಾರದ ಆದೇಶದಂತೆ ಈಗಾಗಲೇ ೧೦ ಮತ್ತು ೧೨ ತರಗತಿಗಳು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ನಮ್ಮ ಕ್ಷೇತ್ರದ ಶಿಕ್ಷಣಾಧಿಕಾರಿಗಳ ಜೊತೆಗೆ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆಗೆ ಕೆಲಹೊತ್ತು ಸಮಯ ಕಳೆದು ಶಾಲೆಗಳನ್ನು ಆರಂಭ ಮಾಡಿದ ಬಳಿಕ ಆದ ಅನುಕೂಲ, ಅನಾನುಕೂಲಗಳ ಬಗ್ಗೆ ಮಾಹಿತಿ ಪಡೆದರು.
ರಾಜ್ಯ ಸರ್ಕಾರದ ಆದೇಶದಂತೆ ಶಾಲಾ ಕಾಲೇಜುಗಳ ಆರಂಭ ಮಾಡುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಿಕ್ಷಣದ ಜೊತೆಗೆ ಶುಚಿತ್ವದ ಕಡೆಗೆ ಹೆಚ್ಚಿನ ಒತ್ತು ನೀಡುವಂತೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಮ್ಮ ಕ್ಷೇತ್ರದ ಯಾವುದೇ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಅನಾನುಕೂಲ ಆಗಬಾರದು. ಉತ್ತಮ ಆರೋಗ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೇಲಸ ಮಾಡಲು ಎಲ್ಲ ರೀತಿಯ ಸಹಕಾರ ನೀಡಲು ನಾನು ಸಿದ್ಧನಿದ್ದೇನೆ ಎಂದು ಗಣೇಶ ಹುಕ್ಕೇರಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ