ಬೆಳಗಾವಿ ಪಾಲಿಕೆ 120 ಕೋಟಿ ರೂ. ಕಾಮಗಾರಿ ಕ್ರಿಯಾ ಯೋಜನೆಗೆ ಒಪ್ಪಿಗೆ – ಭೈರತಿ ಬಸವರಾಜ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬದಲಾವಣೆ ಸಾಧ್ಯಾನೇ ಇಲ್ಲ. ಸಿದ್ದರಾಮಯ್ಯಗೆ ಕನಸು ಬೀಳುತ್ತಿರಬಹುದು, ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.
2 ದಿನಗಳ ಪ್ರವಾಸಕ್ಕೆಂದು ಬೆಳಗಾವಿಗೆ ಆಗಮಿಸಿರುವ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಸಚಿವಸಂಪುಟ ವಿಸ್ತರಣೆಯನ್ನು ಸಂಕ್ರಾಂತಿ ನಂತರ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಮುನಿರತ್ನ, ಎಂ.ಟಿ.ಬಿ. ನಾಗರಾಜ ಮತ್ತು ಆರ್.ಶಂಕರ ಅವರಿಗೆ ಸಚಿವಸ್ಥಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಅವರು ಕೊಟ್ಟ ಮಾತಿಹಗೆ ತಪ್ಪುವುದಿಲ್ಲ ಎಂದು ಅವರು ಹೇಳಿದರು.
ನಾವು ಮತ್ತೆ ಕಾಂಗ್ರೆಸ್ ಸೇರುವ, ಪಕ್ಷ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಆಯ್ಕೆಯಾಗಿ ಬಂದು ಸರಕಾರಿ ರಚಿಸುತ್ತೇವೆ ಎಂದು ಹೇಳಿದರು.
ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಿಶೀಲಿಸಿ, ಸಮಯ ಮಿತಿಯಲ್ಲಿ ಕೆಲಸ ಮುಗಿಸಲು ಸೂಚಿಸಿದ್ದೇನೆ. ಬೆಳಗಾವಿ ಪಾಲಿಕೆಗೆ 120 ಕೋಟಿ ರೂ. ಬಂದಿದ್ದು, ಅದರ ಕ್ರಿಯಾ ಯೋಜನೆಗೆ ಈಗಾಗಲೆ ಒಪ್ಪಿಗೆ ನೀಡಲಾಗಿದೆ. ನಾಳೆ ಎಲ್ಲ ಕಾಮಗಾರಿಗಳನ್ನು ಪರಿಶೀಲಿಸುತ್ತೇನೆ ಎಂದು ಅವರು ಹೇಳಿದರು.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ. ಬಿಜೆಪಿಯ ಮೇಯರ್ ಮಾಡುತ್ತೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ