ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶದಲ್ಲಿ ಕೊರೊನಾ ಸೋಂಕಿನ ನಡುವೆಯೇ ಇದೀಗ ಹಕ್ಕಿ ಜ್ವರದ ಆತಂಕ ಶುರುವಾಗಿದ್ದು, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳಲ್ಲಿ ಈ ಜ್ವರ ಆರಂಭವಾಗಿದೆ.
ಈಗಾಗಲೇ ಕೇರಳ, ಮಧ್ಯಪ್ರದೇಶ, ದೆಹಲಿ ಸೇರಿದಂತೆ 8 ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಮಹಾರಾಷ್ಟ್ರದ ಪ್ರಭಾನಿ ಜಿಲ್ಲೆಯ ಮುರುಂಬಾ ಗ್ರಾಮದಲ್ಲಿ 800 ಕ್ಕೂ ಹೆಚ್ಚು ಕೋಳಿಗಳು ಹಕ್ಕಿ ಜ್ವರಕ್ಕೆ ಬಲಿಯಾಗಿವೆ. ಇವುಗಳ ಸ್ಯಾಂಪಲ್ ಗಳನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಕ್ಕಿ ಜ್ವರ ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಈ ನಡುವೆ ಬರ್ಡ್ ಫ್ಯ್ಲೂ ಹಿನ್ನೆಲೆಯಲ್ಲಿ ಕೇರಳದಲ್ಲಿ 40,000ಕ್ಕೂ ಹೆಚ್ಚು ಬಾತುಕೋಳಿಗಳನ್ನು ಕೊಲ್ಲಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ