ಪ್ರಗತಿವಾಹಿನಿ ಸುದ್ದಿ; ರಾಯಚೂರು: ಓರ್ವ ಭ್ರಷ್ಟ್ರ, 420ಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಭ್ರಷ್ಟರಿಗೆ ಪಕ್ಕದಲ್ಲಿ ಕೂರಿಸಿಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಆಡಳಿತ ನಡೆಸುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ವಿಶ್ವನಾಥ್, ಸಿ.ಪಿ.ಯೋಗೇಶ್ವರ್ ಓರ್ವ ಭ್ರಷ್ಟ. ಕಾಣೆಯಾಗಿದ್ದ ವ್ಯಕ್ತಿಯನ್ನು ತಂದು ಮಂತ್ರಿ ಮಾಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಇವರಿಗೆ ಯಾಕೆ ಬೆಂಬಲ ನೀಡುತ್ತಿದ್ದಾರೆ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಕ್ರಮಣದ ನಂತರ ಒಬ್ಬೊಬ್ಬರು ಒಂದೊಂದು ಸಿಡಿ ಬಿಡುಗಡೆ ಮಾಡಲಿದ್ದಾರೆ. ವಿಜಯೇಂದ್ರ ಹಸ್ತಕ್ಷೇಪದಿಂದಲೇ ಶಾಸಕರು ಬಂಡಾಯವೆದ್ದಿದ್ದಾರೆ. ಕುಟುಂಬ ರಾಜಕಾರಣದಿಂದ ಯಡಿಯೂರಪ್ಪ ಹಾಳಾಗುತ್ತಿದ್ದಾರೆ. ಯಡಿಯೂರಪ್ಪನವರಿಂದಲೇ ಬಿಜೆಪಿ ನಾಶವಾಗಲಿದೆ. ಬಿಜೆಪಿಗೆ ಸನ್ ಸ್ಟ್ರೋಕ್ ಹೊಡೆದಿದ್ದು, ಜನತಾ ಪರಿವಾರ, ಕಾಂಗ್ರೆಸ್ ನಂತೆಯೇ ಬಿಜೆಪಿ ಕೂಡ ಸನ್ ಸ್ಟ್ರೋಕ್ ನಿಂದ ಹಾಳಾಗಲಿದೆ ಎಂದು ವಿಶ್ವನಾಥ್ ಗುಡುಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ