ಹಂಗರಗಾ ಗ್ರಾಮದಲ್ಲಿ 2.17 ಕೋಟಿ ರೂ. ರಸ್ತೆ ಕಾಮಗಾರಿಗೆ ಲಕ್ಷ್ಮಿ ಹೆಬ್ಬಾಳಕರ್ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಂಗರಗಾ ಗ್ರಾಮದಲ್ಲಿ 2.17 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಕಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಸಂಜೆ ಚಾಲನೆಯನ್ನು ನೀಡಿದರು.
ಹಂಗರಗಾ ಗ್ರಾಮದಿಂದ ಕಲ್ಲೆಹೋಳ ಮುಖ್ಯ ರಸ್ತೆಯವರೆಗೆ ಡಾಂಬರಿಕರಣವಾಗಲಿದ್ದು, ನಿಗದಿತ ಸಮಯದಲ್ಲಿ ಮುಗಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು.
ಅಭಿವೃದ್ಧಿ ಕೆಲಸಗಳು ನಿಲ್ಲಬಾರದೆನ್ನುವ ಕಾರಣಕ್ಕೆ ಕತ್ತಲು ಕವಿದಿದ್ದರೂ ಆಗಮಿಸಿದ್ದೇನೆ. ಗ್ರಾಮಸ್ಥರ ಪ್ರೀತಿಯ ಆಹ್ವಾನದ ಮೇರೆಗೆ ಬಂದು ಪೂಜೆ ನೆರವೇರಿಸಿದ್ದೇನೆ. ನಾನು ಒಬ್ಬ ಜನಪ್ರತಿನಿಧಿಯಾಗಿ ನನ್ನ ಕರ್ತವ್ಯವನ್ನು ನನ್ನಿಂದ ಸಾಧ್ಯವಾದಷ್ಟರ ಮಟ್ಟಿಗೆ ನಿರ್ವಹಿಸುತ್ತಿದ್ದೇನೆ. ಚುನಾವಣೆ ಪೂರ್ವ ನಿಮಗೆ ಕೊಟ್ಟರುವ ಮಾತನ್ನು ಉಳಿಸಿಕೊಳ್ಳುವ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಜನರು ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಇಷ್ಟೊಂದು ಅವಿಶ್ರಾಂತವಾಗಿ ಕೆಲಸ ಮಾಡುವ ಶಾಸಕರನ್ನು ನಾವು ಹಿಂದೆಂದೂ ಕಂಡಿರಲಿಲ್ಲ. ಜನಪ್ರತಿನಿಧಿಗಳ ಮೇಲಿನ ವಿಶ್ವಾಸವೇ ಹೊರಟು ಹೋದ ಸನ್ನಿವೇಶದಲ್ಲಿ ನೀವು ನಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸುವ ಮೂಲಕ ವ್ಯವಸ್ಥೆಯಲ್ಲಿ ನಮಗೆ ಮತ್ತೆ ನಂಬಿಕೆ ಬರುವಂತೆ ಮಾಡಿದ್ದೀರಿ ಎಂದು ಗ್ರಾಮಸ್ಥರು ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಯುವರಾಜ ಕದಂ, ಗುತ್ತಿಗೆದಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ