
ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ವ್ಯಂಗ್ಯವಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಎಸ್.ವೈ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾರೋ ಯಾರಿಗೆ ಗೊತ್ತು? ಅದು ಅಸಹ್ಯವಾಗಿ ಬೇರೆ ಇದೆಯಂತೆ ಎಂದು ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಡಿ ವಿಚಾರದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಈ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಬೇಕು ಎಂದು ಆಗ್ರಹಿಸಿದರು.
ಏಪ್ರಿಲ್ ನಂತರ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಈ ಬಗ್ಗೆ ನನಗೆ ಆರ್.ಎಸ್.ಎಸ್ ಮೂಲಗಳಿಂದ ಮಾಹಿತಿ ಬಂದಿದೆ. ಯಡಿಯೂರಪ್ಪ ಪೂರ್ಣಾವಧಿ ಮುಗಿಸುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಬಿ.ಎಸ್.ವೈ ಅವರನ್ನು ತೆಗೆಯುತ್ತೇನೆ ಎಂದರೆ ಸರ್ಕಾರ ನಡೆಸೋಕೆ ಆಗುತ್ತಾ? ಏಪ್ರಿಲ್ ಬಳಿಕ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.