Kannada NewsLatest
ವ್ಯಕ್ತಿ ಸತ್ತಿದ್ದು ವ್ಯಾಕ್ಸಿನ್ ನಿಂದಲ್ಲ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಳ್ಳಾರಿಯ ಸಂಡೂರಿನಲ್ಲಿ ವ್ಯಾಕ್ಸಿನ್ ತೆಗೆದುಕೊಂಡಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ವ್ಯಕ್ತಿ ಕೊರೊನಾ ಲಸಿಕೆಯಿಂದ ಸಾವನ್ನಪ್ಪಿಲ್ಲ ಎಂದಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಸಾವನ್ನಪ್ಪಿರುವ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಸಿಕೆ ಪಡೆದ ಬಳಿಕ ಒಂದು ದಿನ ಅವರು ಆರೋಗ್ಯದಿಂದಲೇ ಇದ್ದಾರೆ. ಅವರಿಗೆ ಮಧುಮೇಹವಿತ್ತು ಎಂದು ತಿಳಿದುಬಂದಿದೆ. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದರು.



