ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಅಪರಾಧ ಪ್ರಕರಣಗಳ ಪತ್ತೆಗಾಗಿ ಪೊಲೀಸ್ ಇಲಾಖೆಯಲ್ಲಿ ಮುಧೋಳ ತಳಿ ನಾಯಿಗಳ ಬಳಕೆಗೆ ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಬಾಗಲಕೋಟೆ ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರ್ಪಡೆಗೊಂಡ ಕ್ರಿಶ್ ಹೆಸರಿನ ಮುಧೋಳ್ ಹೌಂಡ್ ನಾಯಿ ಮರಿಯನ್ನು ಪೊಲೀಸರು ಆತ್ಮೀಯವಾಗಿ ಬರಮಾಡಿಕೊಂಡರು.
ಕ್ರಿಶ್ ಹೆಸರಿನ ನಾಯಿ ಮರಿಯನ್ನು ಮುಧೋಳ ತಾಲೂಕಿನ ತಿಮ್ಮಾಪುರದ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಮಹೇಶ್, ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಅವರಿಗೆ ಹಸ್ತಾಂತರ ಮಾಡಿದರು.
ಕ್ರಿಶ್ ಗೆ ಮೂರು ತಿಂಗಳು ತುಂಬುತ್ತಿದ್ದಂತೆ ಮೈಸೂರಿನ ಶ್ವಾನ ತರಬೇತಿ ಕೇಂದ್ರಕ್ಕೆ ಕಳುಹಿಸಿ ಅಲ್ಲಿ ಒಂದು ವರ್ಷ ತರಬೇತಿ ನೀಡಲಾಗುತ್ತದೆ. ತರಬೇತಿ ಬಳಿ ಅಪರಾಧ ಪತ್ತೆಗಾಗಿ ಸ್ನಿಫರ್ ಆಗಿ ಕಾರ್ಯನಿರ್ವಹಿಸಲಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನಿಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ