Latest

ಕೇಂದ್ರಿಯ ವಿದ್ಯಾಲಯದ ನೂತನ ಕಟ್ಟಡ ಉದ್ಘಾಟನೆ ಫೆ. 22 ರಂದು 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಮಚ್ಛೆಯಲ್ಲಿರುವ ಕೇಂದ್ರಿಯ ವಿದ್ಯಾಲಯ ಸಂ.೩ರ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಫೆ.೨೨ ರಂದು ಮಧ್ಯಾಹ್ನ ೩ ಕ್ಕೆ ನಡೆಯಲಿದೆ. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ರಾಜ್ಯ ಖಾತೆ ಸಚಿವ ರಮೇಶ ಜಿಗಜಿಣಗಿ ನೂತನ ಕಟ್ಟಡವನ್ನು ಉದ್ಘಾಟಿಸುವರು.
ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ವಿದ್ಯಾಲಯ ನಿರ್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಹಾಗೂ ಬೆಂಗಳೂರು ಕೆವಿಎಸ್ ಕ್ಷೇತ್ರದ ಉಪ ಆಯುಕ್ತ ಡಿಟಿಎಸ್ ರಾವ್ ಉಪಸ್ಥಿತರಿರುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button