Latest

ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಕೈಬಿಡಿ; ಕೇಂದ್ರ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ರಾಜಧಾನಿ ಬೆಂಗಳುರಿನಲ್ಲಿ ರೈತರು ರಾಜಭವನ ಚಲೋ ಪ್ರತಿಭಟನೆ ನಡೆಸಿದ್ದು, ಅನ್ನದಾತನ ಆಕ್ರೋಶ ಭುಗಿಲೆದ್ದಿದೆ.

ರಾಜಭವನ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ರೈತ ವಿರೋಧಿಯಾದ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ರೈತರು ದೇಶದ ಬೆನ್ನೆಲುಬು, ಇಂದು ರೈತ ಸಂಕಷ್ಟದಲ್ಲಿದ್ದಾನೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರೈತರಿಗೆ ಮಾರಕವಾಗಿದೆ. ಬಂಡವಾಳ ಶಾಹಿಗಳಿಗೆ ಮಣೆ ಹಾಕುವ ಉದ್ದೇಶದಿಂದ ಸರ್ಕಾರ ಈ ನೀತಿ ಜಾರಿಗೆ ತಂದಿದೆ. ಭೂ ಸುಧಾರಣೆ ತಿದ್ದುಪಡಿ ಮಸೂದೆಯಿಂದ ರೈತರು ಬೀದಿಗೆ ಬರುತ್ತಾರೆ. ಹಲವಾರು ರೈತರು 2 ಎಕರೆ ಹಾಗೂ ಅದಕ್ಕಿಂತಲೂ ಕಡಿಮೆ ಭೂಮಿಯನ್ನು ಹೊಂದಿದ್ದು, ಅಷ್ಟೇ ಭೂಮಿಯಲ್ಲಿ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಇರುವ ಆ ಭೂಮಿಯೂ ಕೈಗಾರಿಕೆಗಳ, ಬಂಡವಾಳಶಾಹಿಗಳ ಕೈವಶವಾದರೆ ಆ ರೈತರ ಪಾಡೇನು? ಎಂದು ಪ್ರಶ್ನಿಸಿದರು.

ಬಂಡವಾಳಶಾಹಿಗಳ ಅನುಕೂಲಕ್ಕಾಗಿ ಜಾರಿಗೊಳಿಸುತ್ತಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button