ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿದ್ದ ರೈತರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿಯನ್ನು ಮಾರ್ಗ ಮಧ್ಯೆಯೇ ತಡೆಯಲಾಗಿದೆ.
ಪ್ರತಿಭಟನಾ ರ್ಯಾಲಿ ಮೂಲಕ ರೈತರೊಂದಿಗೆ ರಾಜಭವನದತ್ತ ತೆರಳುತ್ತಿದ್ದ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಹಲವರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ. ಈ ವೇಳೆ ರ್ಯಾಲಿಯಲ್ಲಿ ಸಾಗಿದ್ದ ರೈತರನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಶಾಂತಿಯುತವಾಗಿ ನಡೆಯುತಿದ್ದ ಪ್ರತಿಭಟನೆಯನ್ನು ಪೊಲೀಸಿನವರ ಮೂಲಕ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಇದನ್ನು ನಾವು ಖಂಡಿಸುತ್ತೇವೆ. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಪ್ರಜಾಪ್ರಭುತ್ವ ಬಲವಾಗಿರಬೇಕೆಂದರೆ ವಿರೋಧ ಪಕ್ಷ ಬಲವಾಗಿರಬೇಕು ಎಂದು ಹೇಳಿದರು.
ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಕೈಬಿಡಿ; ಕೇಂದ್ರ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ
ರಾಜಭವನ ಚಲೋ; ಕೇಂದ್ರದ ವಿರುದ್ಧ ಕಾಂಗ್ರೆಸ್; ರೈತರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ