ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಅಮೆರಿಕಾ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಇಂದು ಪ್ರಮಾಣವ್ಚನ ಸ್ವೀಕರಿಸಲಿದ್ದು, ಉಪಾಧ್ಯಕ್ಷರಾಗಿ ಭಾರತ ಮೂಲದ ಕಮಲಾ ಹ್ಯಾರಿಸ್ ಪದಗ್ರಹಣ ಮಾಡಲಿದ್ದಾರೆ.
ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗಿದ್ದು, ಆಂತರಿಕ ಗಲಭೆ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇಡೀ ವಾಷಿಂಗ್ಟನ್ ನಗರಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಜೋ ಬಿಡೈನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದರೆ ಕಮಲಾ ಹ್ಯಾರಿಸ್ 49ನೇ ಉಪಾಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅಮೆರಿಕ ಉಪಾಧ್ಯಕ್ಷರಾಗಿ ಮಹಿಳೆ ಅಧಿಕಾರ ಸ್ವೀಕರಿಸಲಿದ್ದು, ಭಾರತೀಯ ಮೂಲದ ಮಹಿಳೆ ಅಮೆರಿಕದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಲಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ರತರಿ 8:30ರಿಂದ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10 ಗಂಟೆಗೆ ಅಮೆರಿಕ ರಾಷ್ಟ್ರಗೀತೆಯೊಂದಿಗೆ ಪ್ರಮಾಣವಚನ ಸಮಾರಂಭ ಆರಂಭವಾಗಲಿದೆ. ಪ್ರಮಾಣವಚನ ಸಮಾರಂಭ bideninauaural.org ವೆಬ್ ಸೈಟ್ ನಲ್ಲಿ ನೇರ ಪ್ರಸಾರವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ