ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ 7 ನೂತನ ಸಚಿವರ ಖಾತೆ ಹಂಚಿಕೆ ಮಾಡಲಾಗಿದ್ದು, ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತಹಾಕಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ 10 ಸಚಿವರ ಖಾತೆ ಬದಲಾವಣೆ ಮಾಡಲಾಗಿದ್ದು, ಯಾವ ಸಚಿವರಿಗೆ ಯಾವ ಖಾತೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
* ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆ
* ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ
* ಎಸ್.ಅಂಗಾರ- ಮೀನುಗಾರಿಕೆ ಮತ್ತು ಬಂದರು
* ಸಿ.ಸಿ ಪಾಟೀಲ್- ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ
* ಮುರುಗೇಶ್ ನಿರಾಣಿ-ಗಣಿ ಮತ್ತು ಭೂ ವಿಜ್ನಾನ
* ಎಂಟಿಬಿ ನಾಗರಾಜ್-ಅಬಕಾರಿ ಇಲಾಖೆ
* ಸಿ.ಪಿ.ಯೋಗೇಶ್ವರ್-ಸಣ್ಣ ನೀರಾವರಿ ಖಾತೆ ನೀಡುವ ಸಾಧ್ಯತೆ ದಟ್ಟವಾಗಿದೆ.
ಸಚಿವ ಡಾ.ಕೆ.ಸುಧಾಕರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಮಾತ್ರ ನೀಡಲಾಗಿದ್ದು, ವೈದ್ಯಕೀಯ ಶಿಕ್ಷಣ ಖಾತೆ ವಾಪಸ್ ಪಡೆದು ಜೆ.ಸಿ ಮಾಧುಸ್ವಾಮಿ ಅವರಿಗೆ ನೀಡಲಾಗಿದೆ. ಮಾಧುಸ್ವಾಮಿ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಯನ್ನು ಹೆಚ್ಚುವರಿಯಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಆನಂದ್ ಸಿಂಗ್ ಬಳಿಯಿದ್ದ ಅರಣ್ಯ ಇಲಾಖೆಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದ್ದು, ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದೆ. ಆರ್.ಶಂಕರ್ ಗೆ ಪೌರಾಡಳಿತ, ರೇಷ್ಮೆ ಖಾತೆ, ಗೋಪಾಲಯ್ಯ ಅವರಿಗೆ ತೋಟಗಾರಿಕೆ ಮತ್ತು ಸಕ್ಕರೆ ಹಾಗೂ ನಾರಾಯಣ ಗೌಡ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.
ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಮುಖ ಖಾತೆಗಳಾದ ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.
ನೂತನ ಸಚಿವರ ಖಾತೆ ಹಂಚಿಕೆ ಹಾಗೂ ಬದಲಾವಣೆ ಕುರಿತ ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ – 1627
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ