ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5. ಇದುವರೆಗೆ ಇಬ್ಬರ ಮೃತದೇಹ ಮಾತ್ರ ಪತ್ತೆಯಗೈದ್ದು, ಇನ್ನುಳಿದವರ ದೇಹ ಛಿದ್ರ ಛಿದ್ರಗೊಂಡಿದೆ.
ಸುಮಾರು 10-10:30ರ ಸಮಯದಲ್ಲಿ ಡೈನಾಮೈಟ್ ಬಾಕ್ಸ್ ಗಳನ್ನು ತುಂಬಿದ್ದ ಲಾರಿ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಕ್ವಾರಿ ತಲುಪಬೇಕು ಎನ್ನುವಷ್ಟರಲ್ಲಿ ಲಾರಿಯಲ್ಲಿದ್ದ 50 ಜಿಲೆಟಿನ್ ಗಳು ಏಕಾಏಕಿ ಸ್ಪೋಟಗೊಂಡಿದೆ. ಕಲ್ಲು ಗಣಿಗಾರಿಕೆಯನ್ನು ನಡೆಸಲು ತಂದಿದ್ದ ಜಿಲೆಟಿನ್ ಗಳು ಸ್ಫೋಟಗೊಂಡ ಪರಿಣಾಮ ಕಾರ್ಮಿಕರ ದೇಹ ಛಿದ್ರ ಛಿದ್ರಗೊಂಡಿವೆ.
ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಗಣಿಗಾರಿಕೆಗೆ ಜಿಲೆಟಿನ್ ಪೂರೈಸುತ್ತಿದ್ದ ನರಸಿಂಹ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಂಸದ ಬಿ.ವೈ.ರಾಘವೇಂದ್ರ ಘಟನೆ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸ್ಫೋಟ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆಗ್ರಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ