ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾನಗರ ಪಾಲಿಕೆ ಬಳಿ ಇದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಮುಂದಾಗಿದ್ದ ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೆಳಗಾವಿ ಗಡಿ ಪ್ರವೇಶಿಸಿ ಪಾಲಿಕೆಯ ಬಳಿ ಸ್ಥಾಪಿಸಲಾಗಿದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಯತ್ನಿಸಿದ್ದ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಶಿವಸೇನೆ ಕಾರ್ಯಕರ್ತರನ್ನು ಜ.21ರಂದು ಪೊಲೀಸರು ಶಿನ್ನೊಳ್ಳಿ ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ್ದರು. ಈ ವೇಳೆ ಶಿವಸೇನೆ ಹಾಗೂ ಪೊಲೀಸರ ನಡುವೆ ವಾಗ್ವಾದ, ನೂಕಾಟ-ತಳ್ಳಾಟ ಕೂಡ ನಡೆದಿತ್ತು. ಇದೀಗ ಪೊಲೀಸರು ಶಿವಸೇನೆ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ