ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿದ್ದೆ ಹೊರತು ರಾಜಕೀಯ ವಿಚಾರಕ್ಕಾಗಿ ಅಲ್ಲ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮ್ಮಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಶಾಸಕ ಕುಮಾರಸ್ವಾಮಿ, ಸಚಿವ ಜಾರಕಿಹೊಳಿ ಜೊತೆ ಯಾವುದೇ ರಾಜಕೀಯ ವಿಚಾರವಾಗಿ ಚರ್ಚೆ ನಡೆಸಿಲ್ಲ. ನನಗೆ ಸಚಿವ ಸ್ಥಾನ ಸಿಗದಿರುವುದು ಈಗ ಅಪ್ರಸ್ತುತ ಎಂದರು.
ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವ, ಶಾಸಕರು ಸಚಿವರ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಸಭೆ ಸೇರಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ