Kannada NewsLatest

ಕೆಎಸ್ಆರ್ ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭಸಿದ್ದು, ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 4 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರು ಬೆಳಗಾವಿ ಮಹಿಳಾ ಪಿಎಸ್ ಐ ಮತ್ತು ಕುಟುಂಬ

ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಬಸ್ಸಿನ ಅಡಿಗೆ ಸಿಲುಕಿಕೊಂಡಿದ್ದು, ಕ್ರೇನ್ ಮೂಲಕ ಕಾರನ್ನು ಹೊರತೆಗೆಯುವ ಯತ್ನ ನಡೆದಿದೆ.

ಬಸ್ ಬೆಳಗಾವಿಯಿಂದ ಇಳಕಲ್ ಕಡೆಗೆ ಹೊರಟಿದ್ದರೆ, ಕಾರು ಯರಗಟ್ಟಿಯಿಂದ ಬೆಳಗಾವಿಗೆ ಹೊರಟಿತ್ತು. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವರ –

ಅಪಘಾತದಲ್ಲಿ ಮೃತಪಟ್ಟವರು ಬೆಳಗಾವಿ ಮಹಿಳಾ ಪಿಎಸ್ ಐ ಮತ್ತು ಕುಟುಂಬ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button