ಪ್ರಗತಿವಾಹಿನಿ ಸುದ್ದಿ; ಮುಂಬೈ: ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಟ್ವೀಟ್ ಮೂಲಕ ಕ್ಯಾತೆ ತೆಗೆದಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇದೀಗ ಪುಸ್ತಕ ಬಿಡುಗಡೆ ಮಾಡಲು ಹೊರಟಿದ್ದಾರೆ.
ಗಡಿ ವಿವಾದ ವಿಚಾರಗಳನ್ನೊಳಗೊಂಡ ಪುಸ್ತಕವೊಂದನ್ನು ಬಿಡುಗಡೆ ಮಾಡಲು ಮಹಾ ಸಿಎಂ ಸಿದ್ಧತೆ ನಡೆಸಿದ್ದು, ಮಧ್ಯಾಹ್ನ 12:30ಕ್ಕೆ ಈ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕ ಮಹಾರಾಷ್ಟ್ರ ಸರ್ಕಾರದಿಂದಲೇ ಸಿದ್ಧಗೊಂಡಿದೆ.
ಮಾಹಾರಾಷ್ಟ್ರ ಕರ್ನಾಟಕ ಸೀಮಾವಾದ-ಸಂಘರ್ಷ ಆನಿ ಸಂಕಲ್ಪ ಎನ್ನುವ ಪುಸ್ತಕ ಇದಾಗಿದೆ. ಮುಂಬೈ ಮಂತ್ರಾಲಯದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ