Latest

ಶಾಲಾ ಶುಲ್ಕ ನಿಗದಿಗೆ ಜ.31ರ ಡೆಡ್ ಲೈನ್; ಪ್ರತಿಭಟನೆಗೆ ಮುಂದಾದ ಪೋಷಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಗದಿ ಕುರಿತು ಈ ವರೆಗೂ ಯಾವುದೇ ನಿರ್ಧಾರ ಕೈಗೊಳ್ಳದೇ ಇರುವುದರಿಂದ ರೊಚ್ಚಿಗೆದ್ದಿರುವ ಪೋಷಕರು ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಿವೆ.

ಶುಲ್ಕ ನಿಗದಿ ವಿಚಾರವಾಗಿ ಈಗಾಗಲೇ ಎರಡು ಬಾರಿ ಸಭೆ ಕರೆದರೂ ಕೂಡ ಸಚಿವರು ಶುಲ್ಕ ಕಡಿಮೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಈ ಬಾರಿ ಕೊರೊನಾ ಕಾರಣದಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಈ ಬಗ್ಗೆ ತಕ್ಷಣ ನಿರ್ಧಾರ ಕೈಗೊಳ್ಳಬೇಕು. ಜನವರಿ 31ರೊಳಗೆ ಶುಲ್ಕ ನಿಗದಿ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button