Latest

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ  ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ.
ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ.
ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣವಾಗಲಿ ಎಂದು ಆಶಿಸಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸೀತಾರಾಮ್ ಅವರಿಗೆ ಶುಭಾಶಯ ಕೋರಿದ್ದಾರೆ.

Related Articles

Back to top button