Latest

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಶಿಕಲಾ ನಟರಾಜನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಶಿಕಲಾ ಜ.27ರಂದು ಬಿಡುಗಡೆಯಾಗಿದ್ದರು. ಆದರೆ ಅವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್ಣ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

ಶಶಿಕಲಾ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಆಸ್ಪತ್ರೆಯ ಬಳಿ ಅಪಾರ ಸಂಖ್ಯೆಯಲ್ಲಿ ಶಶಿಕಲಾ ಅಭಿಮಾನಿಗಳು ನೆರೆದಿದ್ದರು. ಮುಂಜಾಗೃತಾ ಕ್ರಮವಾಗಿ 300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಶಶಿಕಲಾ, ಏರ್ ಪೋರ್ಟ್ ಮಾರ್ಗದಲ್ಲಿರುವ ಪ್ರೆಸ್ಟಿಜ್ ಗಾಲ್ಫ್ ಶೈರ್ ರೆಸಾರ್ಟ್ ಗೆ ತೆರಳಿದ್ದಾರೆ.

ಇನ್ನು ಶಶಿಕಲಾ ನಟರಾಜನ್ ಫ್ರೆಬ್ರವರಿ 11ರ ನಂತರ ಮಾಘ ಮಾಸದಲ್ಲಿ ತಮಿಳುನಾಡಿಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ. ಅಮವಾಸ್ಯೆ ಬಳಿಕ ಮಾಘ ಮಾಸದಲ್ಲಿ ಶಶಿಕಲಾ ತಮಿಳುನಾಡಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Back to top button