ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದು, ಈ ಬಜೆಟ್ ಭಾರತದ ಆತ್ಮವಿಶ್ವಾಸವನ್ನು ವಿಶ್ವಕ್ಕೆ ತೋರಿಸುತ್ತದೆ ಎಂದಿದ್ದಾರೆ.
ಬಜೆಟ್ ಮಂಡನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ವಿತ್ತ ಸಚಿವೆ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು. ಕೊರೊನಾ ಮಹಾಮಾರಿ ಮನುಕುಲವನ್ನೇ ಬಿಚ್ಚಿ ಬೀಳಿಸಿದ ಈ ಸಂದರ್ಭದಲ್ಲಿ ಭಾರತ ಬಜೆಟ್ ಆತ್ಮವಿಶ್ವಾಸ ಹೆಚ್ಚಿಸಿದೆ. ಸ್ವಾವಲಂಭನೆಯ ದೃಷ್ಟಿಕೋನವನ್ನು ಹೊಂದಿರುವ ಬಜೆಟ್ ಸಮಾಜದ ಪ್ರತಿ ನಾಗರಿಕನಿಗೂ ಸಹಕಾರಿಯಾಗಲಿದೆ ಎಂದು ಹೆಳಿದ್ದಾರೆ.
ಈ ಬಾರಿಯ ಬಜೆಟ್ ರೈತರಿಗೆ ಹೆಚ್ಚು ಅನುಕೂಲಕರವಾಗಿದ್ದು, ಸುಲಭವಾಗಿ ಸಾಲ ಪಡೆದುಕೊಳ್ಳಬಹುದಾಗಿದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ