ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020ನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜ.30) ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು.
ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗ್ದುಂ, ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರಾದ ಡಾ: ಸೋನಾಲಿ ಸರ್ನೋಬತ್, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರುಗಳಾದ ರಾಜೇಂದ್ರ ಜೈನ್ (ಕಟಾರಿಯಾ), ಅರಣ್ಯ ಸಂರಕ್ಷಣಾಧಿಕಾರಿಗಳು, ಪಶುಪಾಲನೆ ಇಲಾಖೆಯ ತಾಲೂಕಿನ ಸಹಾಯಕ ನಿರ್ದೇಶಕರುಗಳು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ