ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ.
ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ ರಾವಣನ ಲಂಕೆಯಲ್ಲಿ ಪೆಟ್ರೋಲ್ ಬೆಲೆ ಕೇವಲ 51 ರೂ ಎಂದು ಹೇಳುವ ಮೂಲಕ ರಾಮ-ಸೀತೆಯರ ಜನ್ಮಭೂಮಿಗಿಂತ ರಾವಣನ ಲಂಕೆಯಲ್ಲಿಯೇ ಪೆಟ್ರೋಲ್ ದರ ಕಡಿಮೆಯಿದೆ ಎಂದು ಚಾಟಿ ಬೀಸಿದ್ದಾರೆ.
ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಜನಸಾಮಾನ್ಯರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ ಕೇಂದ್ರ ಸರ್ಕಾರದ ನಡೆಗೆ ಚಾಟಿ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ