Latest

ಎಟಿಎಂ ಹಲ್ಲೆ ಪ್ರಕರಣ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

2013ರ ನವೆಂಬರ್ 19ರಂದು ಬೆಳಿಗ್ಗೆ 7:10ಕ್ಕೆ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಜ್ಯೋತಿ ಉದಯ್, ಹಣ ಡ್ರಾ ಮಾಡಲೆಂದು ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ನಲ್ಲಿರುವ ಎಟಿಎಂಗೆ ಹೋಗಿದ್ದರು. ಈ ವೇಳೆ ಎಟಿಎಂ ನೊಳಗೆ ನುಗ್ಗಿದ್ದ ಮಧುಕರ್ ರೆಡ್ದಿ ಶಟರ್ ಕ್ಲೋಸ್ ಮಾಡಿ ಮಚ್ಚಿನಿಂದ ಹಲ್ಲೆ ನಡೆಸಿ ಹಣ ಕಸಿದುಕೊಂಡು ಪರಾರಿಯಾಗಿದ್ದ. 2017ರಲ್ಲಿ ಆರೋಪಿಯನ್ನು ಮದನಪಲ್ಲಿ ಪೊಲೀಸರು ಬಂಧಿಸಿದ್ದರು.

ಬರೋಬ್ಬರಿ 4 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಿದ್ದು, ದರೋಡೆ ಆರೋಪದಡಿ 10 ವರ್ಷ ಜೈಲು ಶಿಕ್ಷೆ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button