
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ದಂಪತಿ ವಂಚನೆ ಮಾಡಿರುವ ಆರೋಪಿಗಳು. ವಂಚನೆಗೊಳಗಾದ ಡಾ.ಪ್ರಭಾ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ತಾವು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ ಡಾ.ಪ್ರಭಾ ಅವರಿಂದ ಹಣ ಪಡೆದಿದ್ದಿದ್ದಾರೆ ಎನ್ನಲಾಗಿದೆ. ಸದ್ಯ ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧಕಾರ್ಯ ನಡೆದಿದೆ.