Kannada NewsKarnataka News

ಬಡಾಲ್ ಅಂಕಲಗಿ ಗ್ರಾಮ ಪಂಚಾಯಿತಿ: ಹೆಬ್ಬಾಳಕರ್ ಬೆಂಬಲಿತರ ಆಯ್ಕೆ

ಅಧ್ಯಕ್ಷ- ಉಪಾಧ್ಯಕ್ಷ ಎರಡೂ ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ

ಪ್ರಗತಿವಾಹಿನಿ ಸುದ್ದಿ,​ ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ.
ಶುಕ್ರವಾರ ನಡೆದ ಚುನಾವಣೆಯಲ್ಲಿ ಗೀತಾ ಎಂ.ಹಿರೇಮಠ ಅಧ್ಯಕ್ಷರಾಗಿ, ಬಸವಂತ ನಾಯಕ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಲಕ್ಷ್ಮಿ ಹೆಬ್ಬಾಳಕರ್ ನಿರ್ದೇಶನದಂತೆ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಬಡಾಲ ಅಂಕಲಗಿಗೆ ತೆರಳಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ , ಸತ್ಕರಿಸಿದರು.
ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸರ್ವ ರೀತಿಯ ಸಹಕಾರ ನೀಡಲಿದ್ದಾರೆ. ನೀಲನಕ್ಷೆಯೊಂದನ್ನು ತಯಾರಿಸಿ ಅಭಿವೃದ್ಧಿಗೆ ಯೋಜನೆ ರೂಪಿಸಿ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಚನ್ನರಾಜ ಹಟ್ಟಿಹೊಳಿ ಭರವಸೆ ನೀಡಿದರು.
ಗ್ರಾಮದ ಹಿರಿಯರು, ಕಾರ್ಯಕರ್ತರು, ಸ್ಥಳೀಯ ಮುಂದಾಳುಗಳು ಉಪಸ್ಥಿತರಿದ್ದರು. ಸಹಕಾರ ನೀಡಿದ್ದಕ್ಕಾಗಿ ಮತ್ತು ಗ್ರಾಮೀಣ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುತ್ತಿರುವುದಕ್ಕಾಗಿ ಗ್ರಾಮಸ್ಥರು ಲಕ್ಷ್ಮಿ ಹೆಬ್ಬಾಳಕರ್ ಪರವಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button