Kannada NewsKarnataka News

ಸಾಂಸ್ಕೃತಿಕ ಭವನಕ್ಕಾಗಿ ಎರಡು ಎಕರೆ ಜಾಗ: ಜಿಲ್ಲಾಧಿಕಾರಿ ಭರವಸೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  : ಸರಕಾರಿ ನೌಕರರ ಸಾಂಸ್ಕೃತಿಕ ಭವನಕ್ಕಾಗಿ ಎರಡು ಎಕರೆ ಜಾಗ ಮುಂದಿನ ದಿನಗಳಲ್ಲಿ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಫೆ. ೫ ) ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಒಂದು ವರ್ಷಗಳಲ್ಲಿ ಕೋವಿಡ್ ಕಾರಣದಿಂದಾಗಿ ಹಲವಾರು ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸಲು ಆಗಿರಲಿಲ್ಲ. ಆದರೆ ನಾವೆಲ್ಲರೂ ಕೊರೋನಾದ ವಿರುದ್ಧ ಹೋರಾಡುವ ಮೂಲಕ ಕೋವಿಡ್ ವಾತಾವರಣದಿಂದ ಹೊರಬಂದಿದ್ದು, ಇಂತಹ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಸಂತಸ ಎನಿಸುತ್ತದೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಉತ್ತಮ ಪ್ರದರ್ಶನವನ್ನು ನೀಡಬೇಕು ಎಂದು ಶುಭ ಹಾರೈಸಿದರು.

ಇದೇ ವೇಳೆ ಮಾತಡಿದ ಜಿಲ್ಲಾ ಪಂಚಾಯತಿ ಮುಖ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವಿ. ಅವರು, ನೌಕರರು ಪ್ರತಿದಿನ ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಯುವಜನ ಸೇವಾ ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಎಚ್.ಡಿ.ಕೋಳೆಕರ್, ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಳಗಾವಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದ ನಂತರ ಹಲವಾರು ಕ್ರೀಡೆಗಳಿಗೆ ಚಾಲನೆಯನ್ನು ನೀಡಲಾಯಿತು.
ಜಿಲ್ಲೆಯ ವಿವಿಧೆಡೆ ಹಲವಾರು ಸರಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಗದೀಶ್ ಗೌಡ ಪಾಟೀಲ್, ಜಿಲ್ಲಾ ಸಂಘದ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ತಾಲ್ಲೂಕಿನ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ವೃಂದ ಸಂಘದ ಅಧ್ಯಕ್ಷರುಗಳು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button