Latest

ನಾಗರಿಕ ಸೇವಾ ಪರೀಕ್ಷೆ; ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆ(CSE)ಗಳಲ್ಲಿ ಪಾಲ್ಗೊಳ್ಳಲು 2020 ಕೊನೆಯ ದಿನವಾಗಿದ್ದು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಈ ನಿಯಮ ಸಡಿಲಿಕೆ ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ ವಿನಾಯ್ತಿ ಅನ್ವಯವಾಗುತ್ತದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button