
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.
ಅನಿಷ್ ಬಾಷಾ ಬಂಧಿತ ಆರೋಪಿ. ವೆಬ್ ಸೈಟ್ ಮೂಲಕವಾಗಿ ಬೆಟ್ಟಿಂಗ್ ನಡೆಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ 3 ಲಕ್ಷ ರೂಪಾಯಿ ಹಣ ಹಾಗೂ 1 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೆಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ