ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಶಿವಸೇನೆ ಕಾರ್ಯಕರ್ತರು ಪುಂಡಾಟ ನಡೆಸಿದ್ದಾರೆ. ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಘೋಷಣೆ ಕೂಗಿದ್ದಾರೆ.
ಬೆಳಗಾವಿಯ ರಾಮಲಿಂಗ ಖಿಂಡ್ ಗಲ್ಲಿಯಲ್ಲಿ ಮಾರಾಠಿ ಹೋರಾಟಗಾರರ ಹುತಾತ್ಮ ದಿನಾಚರಣೆ ಆಚರಿಸುತ್ತಿರುವ ಶಿವಸೇನೆ ಕಾರ್ಯಕರ್ತರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ.
ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಶಿವಸೇನೆ ಪುಂಡರು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ