
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದ ರಾಜ್ಯ ಸರ್ಕಾರ ವಿಜಯ ನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿತ್ತು. ಇದೀಗ ಅಧಿಕೃತ ಆದೇಶ ಹೊರಡಿಸಿದ್ದು, ವಿಜಯನಗರಕ್ಕೆ ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು 5 ತಾಲೂಕುಗಳು ಇರಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ