Kannada NewsKarnataka NewsLatest

ಮುಂದಿನ ಶೈಕ್ಷಣಿಕ ವರ್ಷ ಹಲವು ಮಹತ್ವದ ಯೋಜನೆ: ಶಿಕ್ಷಣ ಸಚಿವ ಸುರೇಶ ಕುಮಾರ್

 

ಪ್ರಗತಿವಾಹಿನಿ ಸುದ್ದಿ, ಖಾನಾಪುರ -: ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು. ಯಾವುದೇ ವಿಷಯದಲ್ಲಿ ಅವರ ಜ್ಞಾನ ಕುಂಠಿತವಾಗಬಾರದು. ಹಾಗಾಗಿ ಶಿಕ್ಷಕರು ಪೂರ್ವ ತಯಾರಿ ಮಾಡಿಕೊಂಡು ಸಮಪರ್ಕವಾಗಿ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು.
ಖಾನಾಪುರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಸೋಮವಾರ (ಫೆ.೮) ಭೇಟಿ ನೀಡಿದ ಬಳಿಕ ಖಾನಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈ ವರ್ಷ ಹಲವು ಹೊಸ ಯೋಜನೆಗಳ ಜಾರಿಯ ಯೋಚನೆ ಇತ್ತು. ಆದರೆ ಕೋವಿಡ್ -19 ಅದನ್ನೆಲ್ಲ ಕಸಿದುಕೊಂಡಿತು. ಮುಂದಿನ ವರ್ಷ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸಹಾಯದಿಂದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗುವುದು. ಕಳೆದ ವರ್ಷ ಕೋವಿಡ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ತಿಳಿಸಿದರು.
ಸೌಲಭ್ಯಗಳು ಇಲ್ಲದೆಯೂ ಹಲವು ವಿದ್ಯಾರ್ಥಿಗಳು ತರಗತಿಯಲ್ಲಿ ಉತ್ತಮ ಪಲಿತಾಂಶ ನೀಡುತ್ತಿದ್ದಾರೆ. ಅವರ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ತರಗತಿಯಲ್ಲಿ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರತಿ ಶಿಕ್ಷಕರು ತರಗತಿಗೆ ಹೋಗುವ ಪೂರ್ವದಲ್ಲಿ ತಯಾರಿ ಮಾಡಿಕೊಂಡು ಹೋಗಬೇಕು. ಯಾವ ವಿಷಯದಲ್ಲಿ ವಿದ್ಯಾರ್ಥಿಗಳು ದುರ್ಬಲರಾಗಿರುತ್ತಾರೆ ಅದರತ್ತ ಹೆಚ್ಚು ಗಮನ ಹರಿಸಬೇಕು ಮತ್ತು ಉತ್ತಮ ರೀತಿಯ ಶಿಕ್ಷಣ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಬಾಲ ಕಾರ್ಮಿಕ, ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು ಹಾಗೂ ಶಾಲೆಗಳ ದುರಸ್ಥಿ ಬಗ್ಗೆ ನಿರಂತರವಾಗಿ ಪರಿಶೀಲನೆ ನಡೆಸಬೇಕು ಎಂದು ಸಚಿವ ಸುರೇಶ್ ಕುಮಾರ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ.ಬಿ.ಪುಂಡಲೀಕ, ಗಜಾನನ ಮನ್ನಿಕೇರಿ ಮತ್ತಿತತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button