ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಸಂಬಳವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಾರಿಗೆ ನೌಕರನೊಬ್ಬ ತನ್ನ ಕಿಡ್ನಿ ಮಾರಾಟಕ್ಕೆ ಮುಂದಾಗಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಡಿಪೋ ನಿರ್ವಾಹಕ ಹನುಮಂತ ಕಳಗೇರ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬ ನಿರ್ವಹಣೆ, ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ಜೀವನ ನಿರ್ವಹಣೆಗೆ ಬೇರೆ ದಾರಿ ಕಾಣದೇ ಇದೀಗ ತಮ್ಮ ಕಿಡ್ನಿ ಮಾರಟಕ್ಕಿಟ್ಟಿರುವುದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಳೆದ ಎರಡು ತಿಂಗಳಿಂದ ಸಂಬಳವಿಲ್ಲದೇ ಪರದಾಡುತ್ತಿದ್ದು, ಮನೆ ಬಾಡಿಗೆ ಕಟ್ಟಲು, ರೇಷನ್ ತರಲು ಕೂಡ ಹಣವಿಲ್ಲ. ಹಾಗಾಗಿ ನಾನು ನನ್ನ ಕಿಡ್ನಿ ಮಾರುತ್ತಿದ್ದೇನೆ ಎಂದು ಮೊಬೈಲ್ ನಂಬರ್ ಸಮೇತ ಪೋಸ್ಟ್ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ