Latest

ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೆದೆ.

ನಿರ್ದೇಶಕ ವೀರೇಂದ್ರ ಶಟ್ಟೆ ಒಡೆತನದ ವೀರೂ ಟಾಕೀಸ್ ಸಂಸ್ಥೆಗೆ ನೀಡಿದ್ದ 40 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದ್ದ ಹಿನ್ನೆಲೆಯಲ್ಲಿ ಸಂಸ್ಥೆಯ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಜೆ ಎಂ ಎಂ ಸಿ 5ನೇ ನ್ಯಾಯಾಲಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

Home add -Advt

ಅಲ್ಲದೇ ನಟಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸುವಂತೆ ಪೊಲಿಸರಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪದ್ಮಜಾಗೆ ಬಂಧನ ಭೀತಿ ಎದುರಾಗಿದೆ.

Related Articles

Back to top button